2 ವರ್ಷದ ಬಳಿಕ ಶಿವಕುಮಾರ್​ ಸಿಎಂ ಆಗೇ ಆಗ್ತಾರೆ: ಕೈ ಶಾಸಕ ಕದಲೂರು ಉದಯ್

Prasthutha|

ಮಂಡ್ಯ: 2 ವರ್ಷದ ಬಳಿಕ ಶಿವಕುಮಾರ್​ ಸಿಎಂ ಆಗೇ ಆಗ್ತಾರೆ, ಸಿದ್ಧರಾಮಯ್ಯ ಅವರು 2.5 ವರ್ಷ ಮಾತ್ರವೇ ಆಡಳಿತ ನಡೆಸಲಿದ್ದಾರೆ. ಆ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಮದ್ದೂರು ಶಾಸಕ ಕದಲೂರು ಉದಯ್ ಹೇಳಿದ್ದಾರೆ.

- Advertisement -

ಮುಖ್ಯಮಂತ್ರಿ ಆಗುವ ಅರ್ಹತೆ ಡಿ.ಕೆ.ಶಿವಕುಮಾರ್​ ಅವರಿಗೆ ಇದೆ ಎಂದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿ.ಕೆ.ಶಿವಕುಮಾರ್​ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮ ಆಸೆ. ರಾಜ್ಯದಲ್ಲಿ ಕಾಂಗ್ರೆಸ್​ ಬಹುಮತ ಬರಲು ಡಿ.ಕೆ.ಶಿವಕುಮಾರ್ ಕಾರಣ ಆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಗಾಗಿ ಡಿಕೆ ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್​ ಅವರಿಗೆ ಸಿಎಂ ಸ್ಥಾನ ಸಿಗಬೇಕೆಂಬುದು ನನ್ನ ಆಸೆಯಾಗಿದೆ ಎಂದು ತಿಳಿಸಿದ್ದಾರೆ.

- Advertisement -

ಡಿ.ಕೆ.ಶಿವಕುಮಾರ್​ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿದ್ದಾರೆ. ಡಿಕೆ ಶಿವಕುಮಾರ್​ ಅವರಿಗೆ ಪಕ್ಷವನ್ನು ಉಳಿಸಿ ಬೆಳೆಸಬೇಕೆಂಬ ಸಾಕಷ್ಟು ಇಚ್ಛಾಶಕ್ತಿ ಇದೆ. ಮುಖಂಡರು ಹಾಗೂ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುತ್ತಿದ್ದಾರೆ. ಡಿಕೆ ಶಿವಕುಮಾರ್​ ಅವರಿಗೆ ಸಿಎಂ ಸ್ಥಾನ ನೀಡಿದರೇ ಕಾಂಗ್ರೆಸ್ ಮತ್ತಷ್ಟು ಗಟ್ಟಿಯಾಗುತ್ತೆ ಎಂದು ಹೇಳಿದ್ದಾರೆ.




Join Whatsapp