ಪಣಜಿ: ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎನ್ನಲಾಗುತ್ತಿರುವ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಗೋವಾದ ವಿವಿಧ ಧಾರ್ಮಿಕ ಸ್ಥಳಗಳಲ್ಲಿಯೂ ಇದೇ ರೀತಿಯ ಹಲವು ಶಿವಲಿಂಗಗಳು ಪತ್ತೆಯಾಗಬಹುದು ಎಂದು ಗೋವಾದ ವಿದ್ಯುತ್ ಸಚಿವ ಸುದಿನ್ ಧವಲಿಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋವಾದಲ್ಲೂ ಶಿವಲಿಂಗಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಭಾರತದ ಪುರಾತತ್ವ ಇಲಾಖೆ ಕಾರ್ಯನಿರ್ವಹಿಸಬೇಕು. ದೇವಾಲಯಗಳನ್ನು ಕೆಡವಿದ ಸ್ಥಳಗಳಲ್ಲಿ ಅಂತಹ ಶಿವಲಿಂಗಗಳು ಇರಬಹುದು ಎಂದು ನನಗೆ ಅನಿಸುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಗೋವಾದ ಧಾರ್ಮಿಕ ಪ್ರೇಕ್ಷಣೀಯ ಸ್ಥಳಗಳಲ್ಲಿ ಶಿವಲಿಂಗಗಳು ಕಂಡುಬರುವ ಸಾಧ್ಯತೆ ಇದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.