January 22, 2021

ಶಿವಮೊಗ್ಗ ಡೈನಾಮೈಟ್ ಸ್ಫೋಟ | ಗುತ್ತಿಗೆದಾರ ಸೇರಿ ಮೂವರ ಬಂಧನ

ಶಿವಮೊಗ್ಗ : ಇಲ್ಲಿನ ಹುಣಸೋಡು ಗ್ರಾಮದಲ್ಲಿ 50ಕ್ಕೂ ಹೆಚ್ಚು ಡೈನಾಮೈಟ್ ಗಳು ಸ್ಫೋಟಗೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ.

ಗುತ್ತಿಗೆದಾರ ಸುಧಾಕರ್, ಕಲ್ಲು ಗಣಿಗಾರಿಕೆಗೆ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಜಮೀನಿನ ಮಾಲೀಕ ಅವಿನಾಶ್ ಎಂಬವರನ್ನು ಬಂಧಿಸಲಾಗಿದೆ.

ಲಾರಿಯೊಂದಕ್ಕೆ ತುಂಬಲಾಗಿದ್ದ ಜಿಲೆಟಿನ್ ಸ್ಫೋಟಗೊಂಡ ಪರಿಣಾಮ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಲಾರಿಯಲ್ಲಿದ್ದ 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಘಟನೆಯಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ವಿಶೇಷ ವರದಿ