ಮಮತಾ ವಿರುದ್ಧ ಚುನಾವಣಾ ಆಯೋಗ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ : ಶಿವಸೇನೆ ಆರೋಪ

Prasthutha|

ಮುಂಬೈ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಚುನಾವಣಾ ಆಯೋಗ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ. ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ 24 ಗಂಟೆಗಳ ಕಾಲ ಪ್ರಚಾರದಲ್ಲಿ ಪಾಲ್ಗೊಳ್ಳಬಾರದು ಎಂದು ಸೂಚಿಸಿರುವ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.  ಪಶ್ಚಿಮ ಬಂಗಾಳದಲ್ಲಿ ಎಲ್ಲಾ ಪಕ್ಷಗಳ ಮುಖಂಡರುಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಆದರೆ, ಮಮತಾಗೆ ಮಾತ್ರ ಏಕೆ ಶಿಕ್ಷೆ ನೀಡಲಾಗಿದೆ?ಎಂದು ಶಿವಸೇನೆಯು ಸಾಮ್ನಾದಲ್ಲಿ ಪ್ರಶ್ನಿಸಿದೆ.

- Advertisement -

ಪಶ್ಚಿಮ ಬಂಗಾಳದಲ್ಲಿ ಶಿವಸೇನೆಯು ಚುನಾವಣೆಗೆ ಸ್ಪರ್ಧಿಸದೆ ತೃಣಮೂಲ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದೆ. ಚುನಾವಣಾ ಆಯೋಗವು ಎಲ್ಲಾ ಪಕ್ಷಗಳ ದೂರುಗಳನ್ನು ಆಲಿಸದೆ, ಬಿಜೆಪಿಯ ದೂರುಗಳಿಗೆ ಮಾತ್ರ ಸ್ಪಂದಿಸುತ್ತಿದೆ. ಆಯೋಗವು, ಏಕಪಕ್ಷಿಯ ನಿರ್ಧಾರ ಕೈಗೊಳ್ಳುವ ಮೂಲಕ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.

Join Whatsapp