ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಷಡ್ಯಂತ್ರ ಮಾಡಲಾಗುತ್ತಿದೆ ಎಂಬ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಯಡಿಯೂರಪ್ಪ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಹೀಗಾಗಿ ‘ಬಾಸ್ ಈಸ್ ಆಲ್ವೇಸ್ ರೈಟ್’. ನಾನು ಟಿಕೆಟ್ ಕೇಳಿಲ್ಲ ಎಂಬುದನ್ನು ಹತ್ತಾರು ಬಾರಿ ಹೇಳಿದ್ದೇನೆ. ನನಗೆ ಗೊತ್ತಿರುವುದು ಪಕ್ಷ ನಿಷ್ಠೆ ಮತ್ತು ಪರಿಶ್ರಮ ಮಾತ್ರ ಎಂದು ಸಿಟಿ ರವಿ ಹೇಳಿದ್ದಾರೆ.
‘ನಮ್ಮ ಗುರಿ ಒಂದೇ, ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ನನ್ನ 36 ವರ್ಷದ ರಾಜಕೀಯ ಜೀವನದಲ್ಲಿ ಪಕ್ಷನಿಷ್ಠೆ ಪ್ರಶ್ನಾರ್ಥಕ ಚಿಹ್ನೆಯಾಗಲು ಅವಕಾಶ ಕೊಟ್ಟಿಲ್ಲ. ಪಂಚಾಯತ್ನಿಂದ ಪಾರ್ಲಿಮೆಂಟ್ ವರೆಗೂ ಬಿಜೆಪಿ ಗೆಲ್ಲಿಸಬೇಕು ಅಂತ ಹೋರಾಟ ಮಾಡಿದ್ದೇನೆ. ಯಾರು ಯಾರು ಒಂದೊಂದು ಚುನಾವಣೆಯಲ್ಲಿ ಒಂದೊಂದು ತರಹ ವರ್ತನೆ ಮಾಡಿರುತ್ತಾರೋ ಅವರಿಗೆ ಇದು ಅನ್ವಯ ಆಗುತ್ತದೆ’ ಎಂದು ಅವರು ಹೇಳಿದ್ದಾರೆ.