ಟಿಕೆಟ್ ತಪ್ಪಿಸಲು ಉಡುಪಿ- ಚಿಕ್ಕಮಗಳೂರಿನಲ್ಲಿ ಪಿತೂರಿ: ಶೋಭಾ ಕರಂದ್ಲಾಜೆ ಗಂಭೀರ ಆರೋಪ

Prasthutha|

ಬೆಳಗಾವಿ: ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

- Advertisement -


ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳುತ್ತಿದ್ದರು ಎಂದು ಹೇಳಿದ್ದಾರೆ.


ಶೋಭಾರನ್ನು ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ ಎಂದರು.



Join Whatsapp