ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿಗೆ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನ ಕೊಟ್ಟ ಶೋಭಾ ಕರಂದ್ಲಾಜೆ

Prasthutha|

ಬೆಂಗಳೂರು: ಪಕ್ಷ ಬಿಟ್ಟು ಹೋದವರಿಗೂ ಆಹ್ವಾನವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿಗೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಟ್ಟೋದವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ. ದೇಶದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮೋದಿಯಂತಹ ನಾಯಕ ಯಾವ ಪಕ್ಷದಲ್ಲೂ ಸಿಗೋದಿಲ್ಲ. ಇಡೀ ವಿಶ್ವವೇ ಅವರನ್ನ ಒಪ್ಪುತ್ತಿದೆ. ಅವರನ್ನ ಪಿಎಂ ಮಾಡಬೇಕು ಅದಕ್ಕಾಗಿ ಯಾರೇ ಪಾರ್ಟಿ ಬಿಟ್ಟಿದರೂ ವಾಪಸ್ ಬರಲು ವಿನಂತಿ. ಮೋದಿಗಾಗಿ, ದೇಶಕ್ಕಾಗಿ, ಮುಂದಿನ ಪೀಳಿಗೆಗಾಗಿ ಬರಬೇಕಿದೆ. ಪಕ್ಷಕ್ಕೆ ವಾಪಸ್ ಬನ್ನಿ. ವಿಶ್ವದ ಶಾಂತಿಗಾಗಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಬಿಜೆಪಿಯನ್ನು ದೇಶದಲ್ಲಿ ಇನ್ನಷ್ಟು ಬಲಿಷ್ಠಗೊಳಿಸೋಣ ಎಂದು ಕರೆ ನೀಡಿದ್ದಾರೆ.

Join Whatsapp