ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ?: ಸ್ಪಷ್ಟನೆ ನೀಡಿದ ಕೇಂದ್ರ ಸಚಿವೆ

Prasthutha|

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

- Advertisement -

ಇನ್ನು ಬಗ್ಗೆ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೇ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೇ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

Join Whatsapp