ಬೆಂಗಳೂರು: ಶೋಭಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಕೆ.ಆರ್.ಪುರಂನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ದರು.
ಈ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಹಳ ವೇಗವಾಗಿ ಬಂದ ವ್ಯಕ್ತಿಗೆ ಶೋಭಾ ಕರಂದ್ಲಾಜೆ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ