ಬೆಂಗಳೂರು: ಕಲ್ಲಂಗಡಿ, ಸಿಹಿ ತಿಂಡಿ, ಇಡ್ಲಿ ಬಳಿಕ ಇದೀಗ ಆಹಾರ ಸುರಕ್ಷತಾ ಇಲಾಖೆ ಮತ್ತೆ ಶಾಕ್ ನೀಡುತ್ತಿದ್ದು, ಪನ್ನೀರ್‌ನಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿದೆ ಎಂಬುದು ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ಗೊತ್ತಾಗಿದೆ.
ಈ ಮೊದಲು ಆಹಾರ ಸುರಕ್ಷತಾ ಇಲಾಖೆ ಕಲ್ಲಂಗಡಿಯಲ್ಲಿ ಕೆಮಿಕಲ್, ಸಿಹಿ ತಿಂಡಿ ಹಾಗೂ ಇಡ್ಲಿಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ ಮಾಡಿತ್ತು. ಇದೀಗ ಪನ್ನೀರ್‌ನ್ನು ಮೆದುವಾಗಿಸಲು ಬಳಸುವ ಕೆಮಿಕಲ್ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ಇಲಾಖೆಯ ವರದಿ ತಿಳಿಸಿದೆ.
ರಾಜ್ಯಾದ್ಯಂತ ಸುಮಾರು 80ಕ್ಕೂ ಹೆಚ್ಚು ಕಡೆಯ ಪನ್ನೀರ್ ಅನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಲ್ಯಾಬ್ ಟೆಸ್ಟ್ ವರದಿ ಬಂದಿದ್ದು, ಆತಂಕಕಾರಿ ಅಂಶ ಬಯಲಾಗಿದೆ. ಪನ್ನೀರ್‌ನಲ್ಲಿ ಕ್ಯಾಲ್ಸಿಯಂ ಹಾಗೂ ಪ್ರೋಟಿನ್ ಪ್ರಮಾಣ ಕಡಿಮೆಯಿರುವುದು ಕಂಡುಬಂದಿದೆ. ಪನ್ನೀರ್ ತಯಾರಿಸುವಾಗ ಕಡಿಮೆ ಪ್ರಮಾಣದ ಕ್ಯಾಲ್ಸಿಯಂ ಹಾಗೂ ಪ್ರೋಟಿನ್‌ಅನ್ನು ಬಳಸುತ್ತಾರೆ ಮತ್ತು ಪನ್ನೀರ್‌ನ್ನು ಮೆದುವಾಗಿಸಲು ಕೆಮಿಕಲ್ ಬಳಸುತ್ತಾರೆ. ಈ ಕೆಮಿಕಲ್ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ಆಹಾರ ಸುರಕ್ಷತಾ ಇಲಾಖೆ ವರದಿ ತಿಳಿಸಿದೆ.