ಶಾಹಿನ್ ಶಿಕ್ಷಣ ಸಂಸ್ಥೆಯ ಮಕ್ಕಳ ವಿಚಾರಣೆ | ಐವರು ಪೊಲೀಸರಿಗೆ ಶೋಕಾಸ್ ನೋಟಿಸ್

Prasthutha|

ಬೆಂಗಳೂರು: ಬೀದರ್‌ನ ಶಾಹಿನ್ ಶಿಕ್ಷಣ ಸಂಸ್ಥೆಯ ಮಕ್ಕಳನ್ನು ದೇಶದ್ರೋಹ ಆರೋಪದಲ್ಲಿ ಸಮವಸ್ತ್ರ, ಮತ್ತು ಶಸ್ತ್ರಾಸ್ತ್ರದೊಂದಿಗೆ ವಿಚಾರಣೆ ನಡೆಸಿದ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠವು ವಕೀಲೆ ನಯನ ಜ್ಯೋತಿ ಝಾವರ್ ಹಾಗೂ ಮಾನವ ಹಕ್ಕುಗಳ ಸಂಘಟನೆ ‘ಸಿಕ್ರಮ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿತು.

ಈಗಾಗಲೇ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ, ‘ಮಕ್ಕಳನ್ನು ವಿಚಾರಣೆಗೆ ಒಳಪಡಿಸುವಾಗ ಬಾಲ ನ್ಯಾಯ ಕಾಯ್ದೆಯ ಸಂಬಂಧಪಟ್ಟ ಕಲಂಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

- Advertisement -

ಐವರು ಪೊಲೀಸರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಅವರಿಂದ ಉತ್ತರಕ್ಕಾಗಿ ಕಾಯುತ್ತಿದ್ದೇವೆ ಮತ್ತು ‘ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ವಿವರಿಸಿದರು.


ಸರಕಾರ ಕೇವಲ ಶೋಕಾಸ್ ನೋಟಿಸ್ ನೀಡಿದರೆ ಸಾಲದು, ಯಾವ ಕ್ರಮವನ್ನು ಕೈಗೊಂಡಿದೆ ಎಂಬುದು ಮುಖ್ಯ’ ಎಂದು ನ್ಯಾಯ ಪೀಠ ಅತೃಪ್ತಿ ವ್ಯಕ್ತಪಡಿಸಿ, ವಿಚಾರಣೆಯನ್ನು 2022ರ ಮಾರ್ಚ್‌ಗೆ ಮುಂದೂಡಿತು.

Join Whatsapp