ಅಮೆರಿಕದ ವಾಲ್’ಮಾರ್ಟ್ ಮಳಿಗೆಯಲ್ಲಿ ಗುಂಡಿನ ದಾಳಿ: ದುಷ್ಕರ್ಮಿ ಸೇರಿ ಹಲವರು ಬಲಿ

Prasthutha|

ವಾಷಿಂಗ್ಟನ್: ಅಮೆರಿಕದ ವರ್ಜೀನಿಯಾದಲ್ಲಿ ಮಂಗಳವಾರ ತಡರಾತ್ರಿ ವಾಲ್’ಮಾರ್ಟ್ ಮಳಿಗೆಯಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಹಲವರು ಬಲಿಯಾಗಿದ್ದು, ಘಟನೆಯಲ್ಲಿ ಹಂತಕ ಕೂಡ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಈ ದುರಂತದಲ್ಲಿ ಅನೇಕ ಸಾವು-ನೋವುಗಳು ಸಂಭವಿಸಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಚೆಸಾಪೀಕ್ ಪೊಲೀಸ್ ಠಾಣೆಯ ಅಧಿಕಾರಿ ಲಿಯೋ ಕೊಸಿನ್ಸ್ಕಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ದುಷ್ಕೃತ್ಯದಲ್ಲಿ ಒಬ್ಬನೇ ಭಾಗಿಯಾಗಿದ್ದಾನೆ ಮತ್ತು ಆತ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಅವರು ತಿಳಿಸಿದ್ದಾರೆ.

ಸಾವಿನ ನಿಖರ ಸಂಖ್ಯೆಯ ಕುರಿತ ಮಾಹಿತಿ ಅಸ್ಪಷ್ಟವಾಗಿದ್ದು, 10ಕ್ಕಿಂತಲೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

Join Whatsapp