ಚಿನ್ನ ದರೋಡೆ ವೇಳೆ ಶೂಟೌಟ್ ಪ್ರಕರಣ: ಮೂವರ ಬಂಧನ

Prasthutha|

ಮೈಸೂರು: ಚಿನ್ನದ ಅಂಗಡಿಯಲ್ಲಿ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಾಲ್ಕು ದಿನಗಳ ಹಿಂದೆ ಚಿನ್ನದ ಅಂಗಡಿಯಲ್ಲಿ ದರೋಡೆ ನಡೆದಿತ್ತು. ಈ ವೇಳೆ ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಚಂದ್ರು ಎಂಬ ಯುವಕ ಬಲಿಯಾಗಿದ್ದ. ಅಪರಾಧಿಗಳನ್ನು ಬಂಧಿಸಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದರು.


ರಾಜಸ್ಥಾನ ಮೂಲದ ಇಬ್ಬರು ಹಾಗೂ ಓರ್ವ ಸ್ಥಳೀಯನನ್ನು ಮಹಾರಾಷ್ಟ್ರದ ಪುಣೆ ಏರ್ ಪೋರ್ಟ್ ನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -


ವಿದ್ಯಾರಣ್ಯಪುರಂ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಡಿಸಿಪಿ ಗೀತಾ ಪ್ರಸನ್ನ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಿದೆ.


- Advertisement -