‘ಜ್ಞಾನವಾಪಿ ಮಸೀದಿ’ ಎಂದು ಕರೆಯಬಾರದು: ಯುಪಿ ಸಿಎಂ ಆದಿತ್ಯನಾಥ್

Prasthutha|

ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ವಿವಾದ ಮಾಡಲಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಆದರೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಇದು ನಿಜವಾಗಿ ಶಿವನ ದೇವಾಲಯ. ಜ್ಞಾನವಾಪಿಯನ್ನು ಮಸೀದಿ ಎಂದು ಕರೆಯಲಾಗುತ್ತಿರುವುದರಿಂದ ಪರಮೇಶ್ವರನ ಸನ್ನಿಧಿಗೆ ಬರುವ ಭಕ್ತರಿಗೆ ಗೊಂದಲ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

- Advertisement -

ಇದು ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಗೆ ದೊಡ್ಡ ಅಡಚಣೆಯಾಗಿ ಪರಿಣಮಿಸಿದೆ. ಈ ಅಡೆತಡೆಯನ್ನು ಹಿಂದೆಯೇ ಅರ್ಥಮಾಡಿಕೊಂಡು ಎಚ್ಚರಿಸಿದ್ದರೆ ಭಾರತ ಎಂದಿಗೂ ವಸಾಹತುಶಾಹಿ ಆಡಳಿತಗಾರರ ಹಿಡಿತಕ್ಕೆ ಬರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

17ನೇ ಶತಮಾನದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಜ್ಞಾನವಾಪಿ ಪ್ರದೇಶದಲ್ಲಿ ಶಿವನ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಸಮುದಾಯಗಳು ಆರೋಪಿಸುತ್ತಿವೆ. ಎರಡೂ ಕಡೆಯವರು ನ್ಯಾಯಾಲಯದ ಬಾಗಿಲು ತಟ್ಟಿದ್ದಾರೆ. 2024ರ ಫೆಬ್ರವರಿಯಲ್ಲಿ ವಾರಣಾಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂ ಭಕ್ತರಿಗೆ ಪೂಜೆ ಮಾಡಲು ಅವಕಾಶ ನೀಡಿದೆ.



Join Whatsapp