ಪಾಕಿಸ್ತಾನದ ಆಟಗಾರರಿಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು ಸ್ವೀಕಾರಾರ್ಹವಲ್ಲ: ಉದಯನಿಧಿ

Prasthutha|

►ಕ್ರೀಡೆಗಳು ದೇಶಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು

- Advertisement -

ಚೆನ್ನೈ: ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯದ ವೇಳೆ ಪಾಕಿಸ್ತಾನದ ಆಟಗಾರರಿಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು ಸ್ವೀಕಾರಾರ್ಹವಲ್ಲ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತವು ತನ್ನ ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಆದಾಗ್ಯೂ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರಿಗೆ ಈ ರೀತಿಯ ಘೋಷಣೆ ಕೂಗಿದ್ದು ಸರಿಯಲ್ಲ. ಕ್ರೀಡೆಗಳು ದೇಶಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು. ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಸ್ವೀಕಾರಾರ್ಹವಲ್ಲ ಎಂದು ಬರೆದುಕೊಂಡಿದ್ದಾರೆ.