Home ಟಾಪ್ ಸುದ್ದಿಗಳು ಅನಗತ್ಯ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ: ಕೃಷ್ಣ ಬೈರೇಗೌಡ ಸೂಚನೆ

ಅನಗತ್ಯ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ: ಕೃಷ್ಣ ಬೈರೇಗೌಡ ಸೂಚನೆ

ಬಾಗಲಕೋಟೆ: ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಎಸ್ ಪಿಗಳಿಗೆ ಸೂಚನೆ ಕೊಟ್ಟದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.


ಘಟಪ್ರಭಾ ನದಿ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆಯ ನೂರಾರು ಕುಟುಂಬಗಳು ತತ್ತರಿಸಿದ್ದು, ಈ ಹಿನ್ನಲೆ ನೆರೆ ಪೀಡಿತ ಪ್ರದೇಶಕ್ಕೆ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿದ್ದರು. ಈ ವೇಳೆ ಮುಧೋಳದಲ್ಲಿ ಮಾತನಾಡಿದ ಅವರು, ‘ ರಾಜ್ಯದ ಜನತೆ ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿದರೆ ಲಾಠಿ ಪ್ರಯೋಗ ಮಾಡಲು ಸೂಚಿಸಿದ್ದೇನೆ ಎಂದರು.


ಮೀನು ಹಿಡಿಯುವುದು, ಕೃಷಿ ಚಟುವಟಿಕೆ ಎಂದು ಇಳಿಯುವುದು, ಸೆಲ್ಫಿಗಾಗಿ ನದಿ ಅಥವಾ ಹೊಳೆಗೆ ಇಳಿಯುವವರು ಒಳ್ಳೆ ಮಾತಿಗೆ ಗೌರವ ಕೊಡಲಿಲ್ಲ ಅಂದರೆ ಲಾಠಿ ಏಟು ನಿಶ್ಚಿತ. ನಮ್ಮ ರಾಜ್ಯದಲ್ಲಿ ಪ್ರಾಣಹಾನಿಯಾಗುವುದಕ್ಕೆ ನಾವು ಬಿಡುವುದಿಲ್ಲ. ನಮ್ಮ ಪುಣ್ಯ ಎರಡು ದಿನದಿಂದ ಮಳೆ ಕಡಿಮೆ ಆಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ನಮಗೆ ಕಡಿಮೆ ಹಾನಿ ಆಗಿದೆ ಎಂದರು.

Join Whatsapp
Exit mobile version