RSS ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ: ಸಚಿವ ಪ್ರಿಯಾಂಕ್ ಖರ್ಗೆ

Prasthutha|

ಕಲಬುರಗಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. ಆರ್ ಎಸ್ ಎಸ್ ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆ ಇಲ್ಲ, ದೇಶಭಕ್ತಿಯೂ ಇಲ್ಲ. ನಾನು ಆರ್ ಎಸ್ ಎಸ್ ಬಗ್ಗೆ ಮಾತನಾಡಲು ಭಯ ಪಡುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್ ಎಸ್ ಎಸ್ ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದರು.


ಚೈತ್ರಾ ಕುಂದಾಪುರ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು ಆರಗ ಜ್ಞಾನೇಂದ್ರ ಕ್ಷೇತ್ರದಲ್ಲಿ ಇದೇ ಚೈತ್ರಾ ಕುಂದಾಪುರ ಅಬ್ಬರದ ಭಾಷಣ ಮಾಡಿದ್ದರು. ಚುನಾವಣೆಯಲ್ಲಿ ಸ್ಟಾರ್ ಕ್ಯಾಂಪೇನರ್ ಆಗಿದ್ದರು. ಎಲ್ಲರು ಕುಮಾರಕೃಪಾದಿಂದಲೇ ಆಪರೇಟ್ ಆಗಿರೋದು ಎಂದು ತಿಳಿಸಿದರು.