ಶ್ರದ್ಧಾ ಕೊಲೆ ಪ್ರಕರಣ: ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡ ಅಫ್ತಾಬ್

Prasthutha|

ನವದೆಹಲಿ: ಶ್ರದ್ಧಾ ವಾಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಪ್ರೇಯಸಿಯನ್ನು ಕ್ಷಣದ ಆಕ್ರೋಶದಲ್ಲಿ ಕೊಲೆ ಮಾಡಿರುವುದಾಗಿ ಮಂಗಳವಾರ ದೆಹಲಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

- Advertisement -

ಐದು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ನಂತರ ಅಫ್ತಾಬ್ ನನ್ನು ಸ್ಥಳೀಯ ಸಾಕೇತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ವಿಶೇಷ ವಿಚಾರಣೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಸಾಕೇತ್ ನ್ಯಾಯಾಲಯವು ಅಫ್ತಾಬ್ ಪೂನಾವಾಲಾನ ಪೊಲೀಸ್ ಕಸ್ಟಡಿಯನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.

- Advertisement -

ಅಲ್ಲದೆ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರನ್ನು ಅನುಮಾನಿಸುವುದು ಸರಿಯಲ್ಲ ಮತ್ತು ನ್ಯಾಯಾಲಯವು ತನಿಖೆಯನ್ನು ಮೇಲ್ವಿಚಾರಣೆ ಮಾಡುವುದಿಲ್ಲ ಎಂದು ಹೇಳಿದೆ.



Join Whatsapp