Home ಟಾಪ್ ಸುದ್ದಿಗಳು ಶ್ರದ್ಧಾ ವಾಲ್ಕರ್‌ ಕೊಲೆ ಪ್ರಕರಣ| ನಾಳೆ ಆರೋಪಿಯ ಮಂಪರು ಪರೀಕ್ಷೆ

ಶ್ರದ್ಧಾ ವಾಲ್ಕರ್‌ ಕೊಲೆ ಪ್ರಕರಣ| ನಾಳೆ ಆರೋಪಿಯ ಮಂಪರು ಪರೀಕ್ಷೆ

ಹೊಸದಿಲ್ಲಿ: ಶ್ರದ್ಧಾ ವಾಲ್ಕರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್‌ ಅಮಿನ್‌ ಪೂನಾವಾಲನನ್ನು ನವದೆಹಲಿಯ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಆಸ್ಪತ್ರೆಯಲ್ಲಿ ಮಂಪರು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ನ್ಯಾಯಾಲಯವು ಮಂಗಳವಾರದವರೆಗೆ ಆರೋಪಿ ಅಫ್ತಾಬ್‌ನನ್ನು ಪೊಲೀಸರ ವಶಕ್ಕೆ ನೀಡಿದೆ. ಇದರ ಒಳಗೆ ಮಂಪರು ಪರೀಕ್ಷೆ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ. ಅಲ್ಲದೇ ಆತನ ವಿಚಾರಣೆಗಾಗಿ ಮತ್ತಷ್ಟು ದಿನಗಳು ತಮ್ಮ ವಶಕ್ಕೆ ನೀಡಬೇಕೆಂದು ಕೋರ್ಟ್‌ ಎದುರು ಪೊಲೀಸರು ಮನವಿ ಮಾಡಿಕೊಳ್ಳುವ ಸಾಧ್ಯತೆಯಿದೆ.

Join Whatsapp
Exit mobile version