ಮಂಗಳೂರು ಆಟೋ ರಿಕ್ಷಾ ಸ್ಫೋಟಕ್ಕೆ ಸರ್ಕಾರದ ನಿರ್ಲಕ್ಷ್ಯ ಕಾರಣ: ಮುತಾಲಿಕ್

ಚಾಮರಾಜನಗರ: ಸರ್ಕಾರದ ನಿರ್ಲಕ್ಷ್ಯದಿಂದಾಗಿ ಮಂಗಳೂರಿನಲ್ಲಿ ಆಟೋ ರಿಕ್ಷಾ ಸ್ಫೋಟ ನಡೆದಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಆರೋಪಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಇಲಾಖೆಗೆ ಭಯೋತ್ಪಾದಕರು, ಕಿಡಿಗೇಡಿಗಳ ಬಗ್ಗೆ ಎಲ್ಲವೂ ಗೊತ್ತಿದೆ. ಆದರೆ, ರಾಜ್ಯದಲ್ಲಿ ಅದು ನಿದ್ದೆ ಮಾಡುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಮಂಗಳೂರಿನಲ್ಲಿ ಬಾಂಬ್‌ ಸ್ಫೋಟ ಪ್ರಕರಣ ನಡೆದಿದೆ’ ಎಂದು ಹೇಳಿದರು.

- Advertisement -

 ‘ಒಂದು ಕಡೆ ಸರ್ಕಾರದ ನಿರ್ಲಕ್ಷ್ಯ, ಮತ್ತೊಂದು ಕಡೆ ಕಾಂಗ್ರೆಸ್‌ನ ಮುಸ್ಲಿಮರ ತುಷ್ಟೀಕರಣವೇ ಭಯೋತ್ಪಾದನೆಗೆ ಮೂಲ ಕಾರಣ. ಪೊಲೀಸರು ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತಿಲ್ಲ. ಮಂಗಳೂರು ಪ್ರಕರಣದ ಶಾರಿಕ್‌ ವಿರುದ್ಧ ಈ ಹಿಂದೆಯೇ ಪ್ರಕರಣ ದಾಖಲಾಗಿ ಬಂಧನವಾಗಿತ್ತು. ಆತ ಜೈಲಿನಿಂದ ಬಿಡುಗಡೆಯಾದ ಮೇಲೆ ಪೊಲೀಸರು ಆತನ ಚಲನವಲನಗಳ ಮೇಲೆ ಕಣ್ಣಿಡಬೇಕಿತ್ತು’ ಎಂದು ಅವರು ಹೇಳಿದರು.