Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆ ಬಯಸಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆ ಬಯಸಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ವಾರಾಣಸಿ: ಪ್ರಧಾನಿ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಕ್ಷೇತ್ರದಿಂದ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ಸೇರಿದಂತೆ 36 ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸೇರಿದಂತೆ 15 ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂಬ ಮಾಹಿತಿಯನ್ನು ಆಯೋಗವು ತನ್ನ ವೆಬ್ಸೈಟ್ನಲ್ಲಿ ಹಂಚಿಕೊಂಡಿದೆ.

ನಾಮಪತ್ರ ತಿರಸ್ಕೃತಗೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿರುವ ಶ್ಯಾಮ್ ರಂಗೀಲಾ, ‘ವಾರಾಣಸಿಯಿಂದ ಸ್ಪರ್ಧಿಸಲು ಬಿಡುವುದಿಲ್ಲ ಎಂದು ನಿರೀಕ್ಷಿಸಿದ್ದೆ. ಅದು ಈಗ ನಿಜವಾಗಿದೆ. ವಿಷಯ ತಿಳಿದು ನೋವಾಯಿತು. ಆದರೆ ನನ್ನ ಉತ್ಸಾಹ ಕುಂದಿಲ್ಲ. ಯಾವುದೇ ಕಾರಣಕ್ಕೂ ನನಗೆ ಕರೆ ಮಾಡಿ ತೊಂದರೆಕೊಡಬೇಡಿ ಎಂದು ಮಾಧ್ಯಮಗಳು ಮತ್ತು ಹಿತೈಷಿಗಳಿಗೆ ಕೇಳಿಕೊಳ್ಳುತ್ತೇನೆ. ನನ್ನ ಬಳಿ ಏನೇ ಮಾಹಿತಿ ಇದ್ದರೂ ಅದನ್ನು ಇಲ್ಲಿ ಹಂಚಿಕೊಳ್ಳುತ್ತಲೇ ಇರುತ್ತೇನೆ’ ಎಂದಿದ್ದಾರೆ.

Join Whatsapp
Exit mobile version