ಕೊಡಗು: ಕಾಡಾನೆ ದಾಳಿಗೆ ಮಹಿಳೆ ಬಲಿ

Prasthutha|

ಕೊಡಗು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ನಡೆದಿದೆ.

- Advertisement -

ಆಯಿಶಾ(63) ಮೃತ ಮೃತ ಮಹಿಳೆ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಸಲಗ ದಾಳಿ ನಡೆಸಿದೆ. ಆಯಿಶಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಳೆದ ಒಂದು ವಾರದ ಹಿಂದೆ ಕೂಡ ಆನೆ ದಾಳಿಗೆ ಟ್ರಾಕ್ಟರ್ ಚಾಲಕರೊಬ್ಬರು ಮೃತ ಪಟ್ಟಿದ್ದರು. ಇದೀಗ ಮತ್ತೆ ಆನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ‌. ಕೂಡಲೇ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

ಕಾಡಾನೆ ದಾಳಿ ಖಂಡಿಸಿ ಸ್ಥಳದಲ್ಲೇ ಪ್ರತಿಭಟನೆ
ಕಳೆದ ಒಂದು ವಾರದ ಹಿಂದೆ ಕೂಡ ಆನೆ ದಾಳಿಗೆ ಟ್ರಾಕ್ಟರ್ ಚಾಲಕರೊಬ್ಬರು ಮೃತ ಪಟ್ಟಿದ್ದರು. ಇದೀಗ ಮತ್ತೆ ಆನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ‌. ಕೂಡಲೇ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೆಲವು ಕಾಡಾನೆ ತಂಡಗಳು ಕಾಫಿ ತೋಟಗಳನ್ನೇ ಬಿಡಾರ ಮಾಡಿಕೊಂಡಿವೆ. ಕಾಫಿ ತೋಟಗಳಲ್ಲಿ ಬೇಕಾದಷ್ಟು ಆಹಾರ ಹಾಗೂ ನೀರು ಇವುಗಳಿಗೆ ಸಿಗುತ್ತಿರುವುದರಿಂದ ಇವು ಕಾಡಿಗೆ ಮರಳುತ್ತಿಲ್ಲ. ಎಷ್ಟೇ ಪಟಾಕಿ ಸಿಡಿಸಿ ಗದ್ದಲ ಎಬ್ಬಿಸಿದರೂ ಹೋಗುತ್ತಿಲ್ಲ. ಇವುಗಳಿಂದಾಗಿ ಕಾಫಿ ತೋಟಗಳಿಗೆ ಹೋಗಲು ಹೆದರಿಕೆಯಾಗುತ್ತಿದೆ. ಕೂಲಿ ಮಾಡಲು ಜನ ಸಿಗುತ್ತಿಲ್ಲ ಎಂದು ಸ್ಥಳೀಯರು ಅಲವತ್ತುಕೊಂಡಿದ್ದಾರೆ.

Join Whatsapp