‘ಪೋಲಿಯೋ ಮಾದರಿಯಲ್ಲಿ ಕೋವಿಡ್ ಲಸಿಕೆ ನೀಡಿ’ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Prasthutha|

ಬೆಂಗಳೂರು : ರಾಜ್ಯದಲ್ಲಿ ಪೋಲಿಯೋ ಮಾದರಿಯಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಕೋವಿಡ್ ಲಸಿಕೆ ಇಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕಾ ಅಭಿಯಾನ ಆರಂಭಿಸಿರುವುದು ಕೇವಲ ಫೋಟೋಗಾಗಿ ಅಭಿಯಾನ ಎಂಬುದನ್ನು ಸೂಚಿಸುತ್ತದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪೋಲಿಯೋ ಮಾದರಿಯಲ್ಲಿ ಕೋವಿಡ್ ಲಸಿಕೆ ನೀಡಬೇಕು. ಮನೆ ಮನೆಗೂ ತೆರಳಿ ಕೋವಿಡ್ ಲಸಿಕೆ ನೀಡಬೇಕು. ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ 2 ಸಾವಿರ ಕೋಟಿ ರೂ. ಬೇಕು. ರಾಜ್ಯದಲ್ಲಿ ರೆಮ್ ಡಿಸಿವಿರ್ ಇಂಜೆಕ್ಷನ್ ಕೂಡ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

- Advertisement -

18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುವುದೆಂದು ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಯಾವ ತಯಾರಿ ಮಾಡಿಕೊಂಡಿದೆ? ನನಗಿರುವ ಮಾಹಿತಿ ಪ್ರಕಾರ ಮೇ. ತಿಂಗಳಾಂತ್ಯಕ್ಕೆ ಲಸಿಕೆ ಸಿಗಬಹುದು ಎಂದು ಅವರು ಹೇಳಿದ್ದಾರೆ.

- Advertisement -