ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ? : ಸಿದ್ದರಾಮಯ್ಯ

Prasthutha|

ಬೆಂಗಳೂರು : ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ. ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ ಯಡಿಯೂರಪ್ಪನವರೇ? ಎಂದು ಪ್ರಶ್ನಿಸಿದ್ದಾರೆ.

ಲಾಕ್ ಡೌನ್, ಬಂದ್, ಕರ್ಪ್ಯೂ‌….. ಇನ್ನೇನೋ, ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ ಎಂದು ಹೇಳಿದ್ದಾರೆ.

- Advertisement -

ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ? ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ.. ಏನಿದು ಮುಖ್ಯಮಂತ್ರಿಯವರೇ? ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ ಎಂದು ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Join Whatsapp