ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Prasthutha|

ತುಮಕೂರು: ಡಿ.ಕೆ.ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನಿಡಿದ್ದಾರೆ.

- Advertisement -

ನಗರದಲ್ಲಿ ಮಾಧ್ಯಮದವರೊಂದಿಗಿ ಮಾತನಾಡಿದ ಅವರು, ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇವರೆಲ್ಲರೂ ಡಿ.ಕೆ.ಸುರೇಶ್ ರನ್ನು ಸೋಲಿಸ್ತಾರೆಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ, ಈಗ ಅದು ರಿಪೀಟ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.


ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಅಂತಾ ಒಂದು ಅಹಿಂದ ಟೀಮ್ ಯಾವಾಗಲೂ ಸಹ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ.ಸುರೇಶ್ ಸೋಲಿಸಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಸುರೇಶ್ರನ್ನು ಸೋಲಿಸ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸುರೇಶ್ರನ್ನು ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ ಎಂದು ಹೇಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚು ರೂಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೈತಿಕತೆ ಕುಸಿಯಬೇಕು ಅಂತಾ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರವೂ ಉಳಿಯಲ್ಲ. ರಾಜಕೀಯ ಧ್ರುವೀಕರಣ ಶುರುವಾಗುತ್ತೆ ಎಂದಿದ್ದಾರೆ.

- Advertisement -


ಕಾಂಗ್ರೆಸ್ನಲ್ಲಿ ಒಳಜಗಳ ಶುರುವಾಗುತ್ತೆ. ಈಗಾಗಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರ ಸೋಲಿನಿಂದ ಇಲ್ಲೂ ಜಗಳ ಶುರುವಾಗಿದೆ. ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.



Join Whatsapp
Exit mobile version