►ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ
►ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ
►ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ: ಸಿಎಂ ಘೋಷಣೆ
ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಒದಗಿಸಲಾಗುವುದು. ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ: ಸಿಎಂ ಘೋಷಣೆ
ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ದೀಫ್ ಫೇಕ್ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್ ಸಿಇಎನ್ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು
ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು ಇಡಲಾಗುವುದು. 1.33 ಕೋಟಿ ಮಹಿಳೆಯರಿಗೆ ಯೋಜನೆಯಿಂದ ಲಾಭವಾಗಲಿದೆ. ಜನವರಿ 31ರವರೆಗೆ 1.27 ಕೋಟಿ ಮಹಿಳೆಯರ ನೋಂದಣಿಯಾಗಿದೆ, 11726 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. 2024-25ರಲ್ಲಿ 28,608 ಕೋಟಿ ಹಣ ರೂಪಾಯಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಣೆ ಮಾಡಿದರು.