ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ: ಸಿದ್ದರಾಮಯ್ಯ ಘೋಷಣೆ

Prasthutha|

ಕೋಲಾರ: ಮಾಜಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

- Advertisement -

ಕೋಲಾರದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಈ ವಿಷಯವನ್ನು ಸ್ವತಃ ಸಿದ್ದರಾಮಯ್ಯ ಪ್ರಕಟಿಸಿದರು.

ನಿಮ್ಮ ಪ್ರೀತಿಗೆ ಮನ್ನಣೆ ನೀಡಿ ಕೋಲಾರದಿಂದ ಸ್ಪರ್ಧೆ ಮಾಡುವೆ ಎಂದು ಹೇಳುವ ಮೂಲಕ ಅನೇಕ ದಿನಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

- Advertisement -

 ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಸ್ಪರ್ಧೆಯ ನಿರ್ಧಾರವನ್ನು ಸಿದ್ದರಾಮಯ್ಯ ಘೋಷಿಸಿದರು.

  ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಪಕ್ಷದ ನಿರ್ಧಾರ ಅಂತಿಮವಾಗಲಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ. ಇಲ್ಲಿ ಯಾವುದೇ ಕಾರಣಕ್ಕೂ ತಪ್ಪು ಸಂದೇಶ ಹೋಗಬಾರದು. ನೀವು ಯಾವುದೇ ಕಾರಣಕ್ಕೂ ಸಂಶಯ ಪಡಬೇಡಿ. ಸಿದ್ದರಾಮಯ್ಯ ಇಲ್ಲಿ ಬರುವುದಿಲ್ಲ, ಜನರ ಕಷ್ಟ ಸುಖ ಕೇಳುವುದಿಲ್ಲ. ಸಿದ್ದರಾಮಯ್ಯ ಹೊರಗಿನವರು ಎಂಬ ಅಪಪ್ರಚಾರ ಮಾಡ್ತಾರೆ. ಆದರೆ ಈಗ ಮಾತು ಕೊಡುತ್ತೇನೆ, ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಚಡ್ಡಿ ಹಾಕಿದವನು ಕೂಡ, ಅಂದರೇ ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Join Whatsapp
Exit mobile version