ರಾಜ್ಯದಲ್ಲಿ ಲಸಿಕೆ ಕೊರತೆ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

Prasthutha: July 3, 2021

ಬೆಂಗಳೂರು: ದೇಶದ ಎಲ್ಲಾ ಜನರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಘೋಷಿಸಿದ್ದರೂ ಕರ್ನಾಟಕದಲ್ಲಿ ವ್ಯಾಕ್ಸಿನೇಷನ್ ಕೊರತೆಯಿದೆ. ಆದರೆ ರಾಜ್ಯ ಸರ್ಕಾರ ಲಸಿಕೆ ಕೊರತೆಯನ್ನು ಮುಚ್ಚಿಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಅವರು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ಎಲ್ಲರಿಗೂ ಲಸಿಕೆ ಕೊಡುತ್ತೇವೆ ಎಂದವರು ಈಗ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.


ನಮ್ಮಲ್ಲಿ ಲಸಿಕೆ ಕೊರತೆಯಿದೆ ಎಂದು ಸ್ವತಃ ಬೆಂಗಳೂರು ಕಾರ್ಪೋರೇಷನ್ ಕಮಿಷನರೇ ಹೇಳಿಕೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ಏನು ಮಾಡುತ್ತಿದೆ ? ಆರೋಗ್ಯ ಸಚಿವ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.


ಸುಧಾಕರ್ ನಮ್ಮ ಬಳಿ 5 ಲಕ್ಷ ಲಸಿಕೆ ದಾಸ್ತಾನು ಇದೆ ಎಂದು ಸುಳ್ಳು ಹೇಳಿಕೆ ನೀಡಿದ್ದರು. ದಾಸ್ತಾನು ಇದ್ದರೆ ಇಷ್ಟು ಜನ ಯಾಕೆ ಲಸಿಕೆ ಹಾಕಿಸಿಕೊಳ್ಳಲಾಗದೆ ಶಾಪ ಹಾಕೊಂಡು ಹೋಗುತ್ತಿದ್ದಾರೆ?. ಸರಕಾರ ವ್ಯಾಕ್ಸಿನೇಷನ್ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಮತ್ತು ಯಡಿಯೂರಪ್ಪ ಹಾಗೂ ಸುಧಾಕರ್ ಕೂಡ ವಿಫಲರಾಗಿದ್ದಾರೆ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ