ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲದ ಸಿದ್ದರಾಮಯ್ಯ : ಸಾರಿಗೆ ಸಚಿವ ಶ್ರೀರಾಮುಲು

Prasthutha|

ಮೈಸೂರು : ವಿಪಕ್ಷ  ನಾಯಕ ಸಿದ್ದರಾಮಯ್ಯ ಅವರಿಗೆ , ದಲಿತರು, ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ.  ಅವರೊಬ್ಬ ಮೀರ್‌ಸಾದಿಕ್ ರಾಜಕಾರಣಿ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಟೀಕಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ  ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ  ಅವರು ಕಾಂಗ್ರೆಸ್ ಪಕ್ಷದಲ್ಲಿದ್ದ ಘಟಾನುಘಟಿ ದಲಿತ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಿದರು. ಪರಿಶಿಷ್ಟರಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸದೆ ಮೋಸ ಮಾಡಿದರು ಎಂದು ವಾಗ್ದಾಳಿ ನಡೆಸಿದರು.

ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಆಯೋಗವನ್ನು ಯಾರಾದರೂ ರಚಿಸಿರಬಹುದು. ಆದರೆ, ಅನುಷ್ಠಾನಕ್ಕೆ ತಂದಿರುವುದು ನಮ್ಮ ಸರ್ಕಾರ. ಇದೊಂದು ಐತಿಹಾಸಿಕ ದಾಖಲೆ. ನಮಗೆ ರಾಜಕೀಯ ಇಚ್ಛಾಶಕ್ತಿ ಇರುವುದರಿಂದ ಮೀಸಲಾತಿ ಹೆಚ್ಚಿಸಿದ್ದೇವೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಪರಿಶಿಷ್ಟರಿಗೆ ಸೌಲಭ್ಯ ದೊರೆತಿದೆ  ಎಂದು ಹೇಳಿದರು.

Join Whatsapp
Exit mobile version