ಮೈಸೂರು: ನಂಜನಗೂಡುನ ಐತಿಹಾಸಿಕ ದೇವಸ್ಥಾನ ನೆಲಸಮ ಗೊಳಿಸಿರುವ ಬಿಜೆಪಿಯ ಕ್ರಮವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಥಳೀಯರ ಜೊತೆ ಸಮಾಲೋಚನೆ ನಡೆಸದೆ ದೇವಸ್ಥಾನವನ್ನು ಕೆಡವಲಾಗಿದೆ. ಈ ಮೂಲಕ ಬಿಜೆಪಿಯು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನವನ್ನು ಧ್ವಂಸಗೊಳಿಸುವ ವಿಡಿಯೋ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ದೇವಸ್ಥಾನ ತೆರವು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಕಾನೂನು ಕ್ರಮವನ್ನು ಅನುಸರಿಸಿಲ್ಲ. ಒಂದು ವೇಳೆ ದೇವಸ್ಥಾನವನ್ನು ತೆರವುಗೊಳಿಸುವುದು ಅನಿವಾರ್ಯವಾಗಿದ್ದರೆ ಅದಕ್ಕೆ ಪರ್ಯಾಯ ಸ್ಥಳವನ್ನು ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ಸರ್ಕಾರವು ಹಿಂದೂ ಧಾರ್ಮಿಕ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ. ಶೀಘ್ರವೇ ದೇವಸ್ಥಾನ ಮರುಸ್ಥಾಪನೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.