ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಗೇಂದ್ರ ಅವರು ಇಂದು (ಜೂನ್ 07) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿದರು. ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಿಂದ ನಿರ್ಗಮಿಸಿದರು.