24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ವಿವಾದಾತ್ಮಕ ಹೇಳಿಕೆ ನೀಡಿದ ಹರೀಶ್ ಪೂಂಜಾ

Prasthutha|

- Advertisement -

ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ಯರು, ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಇನ್ನು ಪುತ್ತೂರು ನಗರ ಸಭಾ ಸದಸ್ಯ ಮುಹಮ್ಮದ್ ರಿಯಾಝ್ ಅವರು ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

Join Whatsapp