Home ಕರಾವಳಿ 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ವಿವಾದಾತ್ಮಕ ಹೇಳಿಕೆ ನೀಡಿದ ಹರೀಶ್ ಪೂಂಜಾ

24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ವಿವಾದಾತ್ಮಕ ಹೇಳಿಕೆ ನೀಡಿದ ಹರೀಶ್ ಪೂಂಜಾ

ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ಯರು, ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಪುತ್ತೂರು ನಗರ ಸಭಾ ಸದಸ್ಯ ಮುಹಮ್ಮದ್ ರಿಯಾಝ್ ಅವರು ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

Join Whatsapp
Exit mobile version