Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ: ಪ್ರಹ್ಲಾದ್ ಜೋಶಿ

ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಮೊದಲು NDRF (ನ್ಯಾಷನಲ್ ಡಿಸಾಸ್ಟರ್ ರಿಲೀಫ್ ಫಂಡ್) ಫಂಡ್ ನಲ್ಲಿ ಇಷ್ಟು ಪ್ರಮಾಣದ ಹಣ ಕೊಡುತ್ತಿರಲಿಲ್ಲ. ನಾವು ಅಡ್ವಾನ್ಸ್ ಹಣ ಕೊಡ್ತೀದ್ದೇವೆ. ಬಿ.ಎಸ್. ಯಡಿಯೂರಪ್ಪ ಅದೇ ಹಣವನ್ನು ಬರಗಾಲ ಬಂದಾಗ ಹಂಚಿಕೆ ಮಾಡಿದ್ದಾರೆ. ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತೀದಾರೆ. ನಾವು ಒಂದೇ ಒಂದು ರೂಪಾಯಿ GST ಹಣ ಕೊಡೋದು ಕೂಡ ಬಾಕಿ ಇಲ್ಲ ಎಂದರು.


NDRFನಲ್ಲಿ ನಾವು 12 ಸಾವಿರ ಕೋಟಿ ಕೊಟ್ಟಿದ್ದೇವೆ. ಡೆವಲೂಷನ್ ಫಂಡ್ ಅವರ ಕಾಲದಲ್ಲಿ 60 ಸಾವಿರ ಕೋಟಿ ಇತ್ತು. ನಮ್ಮ ಕಾಲದಲ್ಲಿ 2 ಲಕ್ಷ 36 ಸಾವಿರ ಕೋಟಿ ಕೊಟ್ಟಿದ್ದೇವೆ. ತೆರಿಗೆ ಹಂಚಿಕೆಯಲ್ಲಿ 10 ವರ್ಷದಲ್ಲಿ 81 ಸಾವಿರ ಕೋಟಿ ಹೆಚ್ಚಿದೆ. ನಮ್ಮ ಕಾಲದಲ್ಲಿ 2 ಲಕ್ಷ 85 ಸಾವಿರ ಕೋಟಿ ಕೊಟ್ಟಿದ್ದೇವೆ. ಇವರು ಯಾವುದೇ ಗ್ರ್ಯಾಂಟ್ ಕೊಟ್ಟಿಲ್ಲ ಅಂತೀದಾರೆ. ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ. 2004 ರಿಂದ 2014 ರಲ್ಲಿ 1667 ಕೋಟಿ ಹಣ ಬಿಡುಗಡೆಯಾಗಿತ್ತು. ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಅವರು ಸುಳ್ಳು ರಾಮಯ್ಯ. ನಾನು ನಿನ್ನೆ ಇಂದ ಸಿದ್ದರಾಮಯ್ಯರನ್ನ ಸುಳ್ಳು ರಾಮಯ್ಯ ಎಂದು ಕರೆಯುತ್ತಿದ್ದೇನೆ. ಮಹದಾಯಿ ವಿಚಾರ ಅರಣ್ಯ ಇಲಾಖೆ ನಿರಾಕರಣೆ ಮಾಡಿಲ್ಲ ಎಂದು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

Join Whatsapp
Exit mobile version