ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ ಸಿದ್ದರಾಮಯ್ಯ

Prasthutha|

ಕೋಲಾರ:ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬ ಸುಳಿವು ನೀಡಿದ್ದಾರೆ.

- Advertisement -

ನಾನು ಈಗ ನಾಮಪತ್ರ ಹಾಕಲು ಬಂದಿಲ್ಲ. ಹಾಗೇನಾದರೂ ನಾಮಪತ್ರ ಸಲ್ಲಿಸಲು ಬಂದರೆ ಜೋರು ಚಪ್ಪಾಳೆ ಹೊಡೆಯಿರಿ. ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ’ ಎಂಬ ಹೇಳಿಕೆ ನೀಡುವ ಮೂಲಕ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ  ಮಾತನಾಡಿದ ಅವರು, ‘ಬಾದಾಮಿ, ವರುಣಾ ಕ್ಷೇತ್ರಗಳಲ್ಲೂ ಸ್ಪರ್ಧೆಗೆ ಒತ್ತಡವಿದೆ. ನಾನಿನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕೋಲಾರದಲ್ಲಿ ಸ್ಪರ್ಧಿಸುವಂತೆ ಎಲ್ಲರೂ ಒತ್ತಡ ಹೇರುತ್ತಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು. ಆದ್ದರಿಂದ ಎಲ್ಲಾ ಜನರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಹೇಳಿದರು.

- Advertisement -

ಎಲ್ಲಾ ಧರ್ಮದವರೂ ನಮ್ಮ ದೇಶದಲ್ಲಿ ಇದ್ದಾರೆ. ಬಹುತ್ವದ ದೇಶ ನಮ್ಮದು. ಮನುಷ್ಯ‌ ಇನ್ನೊಬ್ಬ ಮನುಷ್ಯನನ್ನು ಪ್ರೀತಿಸಬೇಕು‌ ಜಾತ್ಯತೀತ, ಬಹುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಕಾಂಗ್ರೆಸ್. ಒಂದೇ ತಾಯಿ ಮಕ್ಕಳಂತೆ ಬದುಕಬೇಕು. ಕ್ರೈಸ್ತ ಸಮುದಾಯದವರೂ ಗೌರವದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಎಲ್ಲಾ ಧರ್ಮಗಳ ಸಂಪ್ರದಾಯ ಆಚರಣೆಗೆ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕ ನಂಜೇಗೌಡ, ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್, ಅನಿಲ್ ಕುಮಾರ್ ಹಾಗೂ ಇತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Join Whatsapp