Home ಟಾಪ್ ಸುದ್ದಿಗಳು ದಾಖಲಾತಿ ಇಟ್ಟುಕೊಂಡು ಮಾತನಾಡಲಿ, ಸುಳ್ಳು ಹೇಳಬಾರದು: ಮೋದಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ದಾಖಲಾತಿ ಇಟ್ಟುಕೊಂಡು ಮಾತನಾಡಲಿ, ಸುಳ್ಳು ಹೇಳಬಾರದು: ಮೋದಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು: ಮಧ್ಯಪ್ರದೇಶದ ಖಂಡವಾದಲ್ಲಿ ನಡೆದಿದ್ದ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದರು.


ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ. ದಾಖಲಾತಿ ಇಟ್ಟುಕೊಂಡು ಮಾತನಾಡಲಿ, ಸುಳ್ಳು ಹೇಳಬಾರದು. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರದ ಹಣ ಕೊಡುವುದಕ್ಕೆ ಆಗಿಲ್ಲ. ಐದು ಗ್ಯಾರಂಟಿ ಜಾರಿ ಮಾಡಲ್ಲ ಎಂದಿದ್ದರು, ನಾವು ಜಾರಿ ಮಾಡಿಲ್ವಾ? ಈ ರೀತಿಯ ಹೇಳಿಕೆ ಪ್ರಧಾನಮಂತ್ರಿಗಳಿಗೆ ಶೋಭೆ ತರುವುದಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಹಿಂದೆ ಲೂಟಿ ಹೊಡೆಯುತ್ತಿದ್ದವರು ಯಾರು? 40% ಅಂತಾ ಯಾರು ಹೇಳಿದ್ದು. ಹಿಂದಿನ ಸರ್ಕಾರದ ಆರೋಪದ ಬಗ್ಗೆ ತನಿಖೆ ಮಾಡಿಸುತ್ತಿದ್ದೇವೆ. ಪ್ರಧಾನಿ ದಾಖಲಾತಿ ಇಟ್ಟುಕೊಂಡು ಹೇಳಲಿ, ಸುಳ್ಳು ಹೇಳಬಾರದು. ಗುಪ್ತಚರ, ಸಿಬಿಐ ಎಲ್ಲವೂ ಅವರ ಬಳಿಯೇ ಇದೆ, ತನಿಖೆ ಮಾಡಿಸಲಿ. ಕೇಂದ್ರ ಸರ್ಕಾರಕ್ಕೆ ಇನ್ನೂ ಬರ ಪರಿಹಾರ ಕೂಡ ಕೊಡಲು ಆಗಿಲ್ಲ. ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಿಎಂ, ಡಿಸಿಎಂ ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ತಿರುಗೇಟು ನೀಡಿದರು.

Join Whatsapp
Exit mobile version