ಲಾಲ್​ ಬಾಗ್​ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿದ್ದರಾಮಯ್ಯ ಚಾಲನೆ

Prasthutha|

ಬೆಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ಲಾಲ್​ ಬಾಗ್​ ನಲ್ಲಿ ಆಯೋಜಸಿರುವ ಫ್ಲವರ್ ಶೋವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

- Advertisement -

ಬಳಿಕ ಫ್ಲವರ್ ಶೋವನ್ನು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ವೀಕ್ಷಣೆ ಮಾಡಿದ್ದು, ಸಚಿವ ರಾಮಲಿಂಗರೆಡ್ಡಿ ಕೂಡ ಸಾಥ್​ ನೀಡಿದರು.

ಈ ಬಾರಿ ಫ್ಲವರ್​ ಶೋನಲ್ಲಿ 68 ಬಗೆಯ 32 ಲಕ್ಷ ಹೂವುಗಳ ಬಳಕೆ ಮಾಡಲಾಗಿದೆ. ಇಂದಿನಿಂದ ಜನವರಿ 28ರವರೆಗೆ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 6.30ರಿಂದ ಸಂಜೆ 7.30ರವರೆಗೆ ವೀಕ್ಷಿಸಬಹುದಾಗಿದೆ.

Join Whatsapp