ದೇವೇಗೌಡರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Prasthutha|

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

- Advertisement -

ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಭೇಟಿಯಾದರು.

ಈ ವೇಳೆ ಚಾಮರಾಜಪೇಟೆ ಶಾಸಕ ಝಮೀರ್ ಅಹ್ಮದ್, ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Join Whatsapp