ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಬ್ಬ ರಾಜಕೀಯ ಪುಕ್ಕಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ಎದುರು ರಾಷ್ಟ್ರ ರಾಜಕಾರಣಕ್ಕೆ ಬರುವ ಆಸೆಯನ್ನು ಹೇಳಿಕೊಳ್ಳುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ. ನನ್ನನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿ ಎಂದು ಹೇಳುವ ಧೈರ್ಯವನ್ನು ಸಿದ್ದರಾಮಯ್ಯ ತೋರಬೇಕಿತ್ತು. ಕನ್ನಡಿಗರು ಪ್ರಧಾನಿಯಾದರೆ ನಮಗೇ ಹೆಮ್ಮೆ ಅಲ್ಲವೇ ಎಂದು ಹೇಳಿದ್ದಾರೆ.