ಮೈಸೂರು: ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ಜಾತಿ-ಧರ್ಮ- ಸಮುದಾಯಗಳಿಗೆ ಅಕ್ಷರ ಮತ್ತು ಅನ್ನ ದಾಸೋಹವನ್ನು ನೀಡಿದ್ದು ಲಿಂಗಾಯತ ವೀರಶೈವ ಮಠಗಳು. ಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಕಾರ್ಯಕ್ರಮಗಳು ಕೂಡ ಶರಣರ ಆಶಯದಂತೆ ಎಲ್ಲಾ ಜಾತಿ, ಧರ್ಮಗಳಿಗೂ ಅನ್ವಯವಾಗುತ್ತವೆ ಎಂದು ವಿವರಿಸಿದರು.