Home ಕರಾವಳಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸು: ಸಚಿವ ಬಿ.ಶ್ರೀರಾಮುಲು

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸು: ಸಚಿವ ಬಿ.ಶ್ರೀರಾಮುಲು

ಮಂಗಳೂರು: ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಮಂಗಳೂರಿನಲ್ಲಿ ವಾಗ್ದಾಳಿ ನಡೆಸಿರುವ ಸಚಿವ ಬಿ.ಶ್ರೀರಾಮುಲು, ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಲು ಹೇಳಿದ್ದಾರೆ, ಇತ್ತೀಚೆಗೆ ಅವರು ತಮ್ಮ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದು, ಸದ್ಯ ಅವರು ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಬೇಡವಾಗಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಲದ ಮರವಾಗಿ ಬೆಳೆದಿದ್ದು, ಕಾರ್ಮಿಕ ವರ್ಗಕ್ಕೆ ಶಕ್ತಿಯನ್ನು ತುಂಬಿದೆ. ಪ್ರಧಾನಿ ಮೋದಿ ದೇಶಕ್ಕೆ ಸಮರ್ಥ ನಾಯಕರಾಗಿದ್ದು, ದೇಶದಲ್ಲಿ ಕಾಂಗ್ರೆಸ್ ಯಾರಿಗೂ ಬೇಡವಾದ ಪಕ್ಷವಾಗಿದೆ ಎಂದು ವ್ಯಂಗ್ಯವಾಡಿದರು.


ಐವತ್ತು ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷವನ್ನು ಇಂದು ಜನತೆ ತಿರಸ್ಕಾರ ಮಾಡಿದ್ದಾರೆ. 2023ರಲ್ಲಿ ಜನ ಬಿಜೆಪಿಯೆಂಬ ಆಲದಮರಕ್ಕೆ ನೀರೆರೆಯುವ ಮೂಲಕ ಮತ್ತಷ್ಟು ಎತ್ತರಕ್ಕೆ ಬೆಳೆಸುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿ ಭಾವನಾತ್ಮಕ ವಿಷಯಗಳಲ್ಲಿ ಅಹಿತಕರ ಘಟನೆ ನಡೆಯುತ್ತಿದ್ದು, ಈ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಗಳು ಸ್ಪಷ್ಟ ಉತ್ತರ ನೀಡಿದ್ದಾರೆ. ಎಲ್ಲಾ ಧರ್ಮೀಯರಿಗೂ ಗೌರವ ಕೊಡುವ ಕೆಲಸ ಬೊಮ್ಮಾಯಿ ಮಾಡುತ್ತಿದ್ದು , ಅವರೊಬ್ಬ ಸಮರ್ಥ ನಾಯಕ ಎಂಬುದನ್ನು ಬಜೆಟ್’ನಲ್ಲಿ ನಿರೂಪಿಸಿದ್ದಾರೆ ಎಂದು ಹೇಳಿದರು.


ಮುಖ್ಯಮಂತ್ರಿ ಬೊಮ್ಮಾಯಿ ಚಾಣಾಕ್ಯನ ರೀತಿಯಲ್ಲಿ ರಾಜಕೀಯ ಮಾಡುವುದನ್ನು ಕಂಡು ಪ್ರತಿಪಕ್ಷ ಗಳಿಗೆ ಇದನ್ನೆಲ್ಲಾ ತಡೆಯಲು ಆಗುತ್ತಿಲ್ಲ, ಹೀಗಾಗಿ ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಜನ ಮರೆಯುತ್ತಿದ್ದಾರೆ ಹೀಗಾಗಿ ಕಾಂಗ್ರೆಸ್ ನಾಯಕರು ಈ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Join Whatsapp
Exit mobile version