Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭೆ ಚುನಾವಣೆ: ಡಿಕೆಶಿ ಘೋಷಣೆ

ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭೆ ಚುನಾವಣೆ: ಡಿಕೆಶಿ ಘೋಷಣೆ

ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಮ್ಮ‌ ಸರ್ಕಾರ ಬಲಿಷ್ಟವಾಗಿದೆ. ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ.ಆದ್ರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ, ಅದರಲ್ಲಿ ಅನುಮಾನ ಬೇಡ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆ ಪ್ರತಿಕ್ರಿಯಿಸಿದ ಡಿಸಿಎಂ, ಆಸೆ ಪಡುವುದು, ಹೇಳೋದು, ಜನರಿಗೆ ಮನವಿ ಮಾಡುವುದು ಸಾಮಾನ್ಯ. ನಾನು ನನ್ನೂರಿಗೆ ಹೋದಾಗ ನನಗೆ ಶಕ್ತಿ ಕೊಡಿ ಎಂದು ಕೇಳುತ್ತೇನೆ. ಅದು ಸ್ವಾಭಾವಿಕ, ಬೇರೆ ರೀತಿ ಯಾಕೆ ಟ್ವಿಸ್ಟ್ ಮಾಡಬೇಕು. ಯತೀಂದ್ರ ಸೂಕ್ಷ್ಮ ವ್ಯಕ್ತಿ, ಬೆಳೆಯುತ್ತಿರುವ ನಾಯಕ. ನಾವು ಅವರಿಗೆ ಸಹಕಾರ ಕೊಡೋಣ ಎಂದಿದ್ದಾರೆ.

Join Whatsapp
Exit mobile version