Home ಟಾಪ್ ಸುದ್ದಿಗಳು ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಯಡಿಯೂರಪ್ಪ ಭೇಟಿ

ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಯಡಿಯೂರಪ್ಪ ಭೇಟಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದ್ದು, ಒಂದಷ್ಟು ಹೊತ್ತು ಮಾತುಕತೆ ನಡೆಸಿದ್ದಾರೆ. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ.

ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ ವೇಳೆ ಉಭಯ ನಾಯಕರ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ

Join Whatsapp
Exit mobile version