Home ಟಾಪ್ ಸುದ್ದಿಗಳು ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ

ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ

ಹೊಸದಿಲ್ಲಿ: ಬುಧವಾರ ದೆಹಲಿಗೆ ಹೋಗಿರುವ ಸಿಎಂ ಸಿದ್ಧರಾಮಯ್ಯ ಕೃಷ್ಣಮೆನನ್ ಮಾರ್ಗದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ನಂತರ ಮೊದಲ ಬಾರಿಗೆ ಅಮಿತ್​ ಶಾ ಅವರನ್ನು ಭೇಟಿ ಆಗಿದ್ದಾರೆ.

ಉಭಯ ನಾಯಕರು ಸಾಕಷ್ಟು ವಿಚಾರಗಳ ಕುರಿತು ಚರ್ಚೆ ಮಾಡಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಕುರಿತು ಅಮಿತ್ ಶಾ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದೀರಾ. ಗುಡ್ ಲಕ್​ ಎಂದು ಮೆಚ್ಚಗೆ ಸೂಚಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ

ಅಮಿತ್ ಶಾ ಅವರನ್ನು ಭೇಟಿಗೂ ಮುಂಚೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಿಸುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಜುಲೈ 1ಕ್ಕೆ ಅಕ್ಕಿ ನೀಡುವ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಿದ್ದೇವೆ. ಈಗಾಗಲೇ ತೆಲಂಗಾಣ, ಪಂಜಾಬ್ ಸೇರಿ ಎಲ್ಲಾ ಕಡೆ ಕೇಳಿದ್ದೇವೆ ಎಂದು ಹೇಳಿದ್ದಾರೆ.

Join Whatsapp
Exit mobile version