Home ಟಾಪ್ ಸುದ್ದಿಗಳು ಪ್ರತಾಪ್ ಸಿಂಹ ಸಹೋದರ ಕೇಸ್ | ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗ: ಕುಮಾರಸ್ವಾಮಿ

ಪ್ರತಾಪ್ ಸಿಂಹ ಸಹೋದರ ಕೇಸ್ | ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗ: ಕುಮಾರಸ್ವಾಮಿ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಜಮೀನಿನಲ್ಲಿ ಮರ ಕಡಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗಪಡಿಸಿಕೊಂಡು ಕ್ರಮ ಕೈಗೊಂಡಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಾಪಸಿಂಹ ಅವರನ್ನು ಪ್ರಕರಣದಲ್ಲಿ ಸಿಲುಕಿಸಲು ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಸನದ ಗೆಂಡೆಕಟ್ಟೆ ಅರಣ್ಯದಿಂದ ಬೀಟೆ ಮರ ಕಡಿದು ಬೇಲೂರಿನಲ್ಲಿರುವ ಪ್ರತಾಪ್ ಸಿಂಹ ಸಹೋದರನ ಗುತ್ತಿಗೆ ಪಡೆದ ಜಮೀನಿನಲ್ಲಿ ಹಾಕಿಸಲು ಸಿದ್ದರಾಮಯ್ಯ ಸೂಚನೆ ಹೊಟ್ಟಿದ್ದಾರೆ ಎಂದು ಆರೋಪಿಸಿದರು. ಪ್ರತಾಪ್ ಸಿಂಹ ತೇಜೋವಧೆ ಮಾಡಲು ಅಧಿಕಾರಿಗಳಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಪ್ರತಾಪ್ ಸಿಂಹ ಸಹೋದರನಿಗೂ ಮರಕಡಿದ ವಿಚಾರಕ್ಕೂ ಸಂಬಂಧವಿಲ್ಲ. ಯಾರು ಯಾರಿಗೆ ಕರೆ ಮಾಡಿದ್ದರು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಕಾಲ್ ಡೀಟೆಲ್ಸ್ ತೆಗೆಸಿದ್ರೆ ಎಲ್ಲವೂ ಗೊತ್ತಾಗುತ್ತೆ ಎಂದು ಕುಮಾರಸ್ವಾಮಿ ಹೇಳಿದರು.

Join Whatsapp
Exit mobile version