ಸಿದ್ದರಾಮಯ್ಯಗೆ ಸಿಎಂ ಸ್ಥಾನದಲ್ಲಿ ಮುಂದುವರೆಯಲು ಅರ್ಹತೆ ಇಲ್ಲ: ಆರ್. ಅಶೋಕ್

Prasthutha|

ಬೆಂಗಳೂರು: ಗುತ್ತಿಗೆದಾರರಿಂದ ಕಮೀಷನ್ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯಲು ಒಂದು ಕ್ಷಣವೂ ಅರ್ಹರಲ್ಲ. ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.

- Advertisement -

ಈ ಕುರಿತಂತೆ ಇಂದು ಎಕ್ಸ್ ಮಾಡಿರುವ ಅವರು, ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ” ಎಂದು ಮಾನ್ಯ ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದಿದ್ದಾರೆ.

ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ, ಈಗ ಮತ್ತೊಮ್ಮೆ ರಂಗೋಲಿ ಕೆಳಗೆ ತೂರಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸಿದ್ದರಾಮಯ್ಯನವರೇ, ತಮಗೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಿ ಎಂದು ಅಶೋಕ್ ಹರಿಹಾಯ್ದಿದ್ದಾರೆ.

Join Whatsapp