Home ಟಾಪ್ ಸುದ್ದಿಗಳು ಶಿವಮೊಗ್ಗ ಕೋಮು ಗಲಭೆಗೆ ಸಿದ್ದರಾಮಯ್ಯ, ಪರಮೇಶ್ವರ ಕುಮ್ಮಕ್ಕು: ಶೋಭಾ ಕರಂದ್ಲಾಜೆ

ಶಿವಮೊಗ್ಗ ಕೋಮು ಗಲಭೆಗೆ ಸಿದ್ದರಾಮಯ್ಯ, ಪರಮೇಶ್ವರ ಕುಮ್ಮಕ್ಕು: ಶೋಭಾ ಕರಂದ್ಲಾಜೆ

ಚಾಮರಾಜನಗರ: ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದ ಗಲಭೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಆರೋಪಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಔರಂಗಜೇಬನ ಖಡ್ಗ ಮೆರವಣಿಗೆ ಮಾಡುತ್ತಿದ್ದಾರೆ. ಆ ಖಡ್ಗದ ತುದಿಗೆ ರಕ್ತದ ಬಣ್ಣ ಹಾಕಿದ್ದಾರೆ. ಹಿಂದೂಗಳ ರಕ್ತ ಬೀಳುತ್ತದೆ ಎಂದು ಉರ್ದುವಿನಲ್ಲಿ ಬರೆದಿದ್ದಾರೆ ಎನ್ನುವ ಮಾಹಿತಿಯಿದೆ. ಮುಸಲ್ಮಾನ ಸಮಾಜದ ಮಾನಸಿಕತೆ ಏನು, ಅವರು ಏನು ಮಾಡಲು ಹೊರಟಿದ್ದಾರೆ. ಯಾಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

Join Whatsapp
Exit mobile version