ಬೆಳಗಾವಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖಾಮುಖಿಯಾದ ಘಟನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಈ ವೇಳೆ ಸಿದ್ದರಾಮಯ್ಯ ಹಾಗೂ ಬಸವರಾಜ ಬೊಮ್ಮಾಯಿ ಪರಸ್ಪರ ಹಸ್ತಲಾಘವ ಮಾಡಿ ಮಾತುಕತೆ ನಡೆಸಿದರು. ಬಳಿಕ ಸಿದ್ದರಾಮಯ್ಯ ಅವರು ಬೊಮ್ಮಾಯಿ ಅವರ ಭುಜ ತಟ್ಟಿದ್ದಾರೆ.
ಬೆಂಗಳೂರಿನಿಂದ ಬಂದಿಳಿದ ಮಲ್ಲಿಕಾರ್ಜುನ ಖರ್ಗೆ ಚಿಕ್ಕೋಡಿಯತ್ತ, ಬಸವರಾಜ ಬೊಮ್ಮಾಯಿ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿಯತ್ತ ತೆರಳಿದರು. ಮಾಜಿ ಸಚಿವ ಡಿ.ಬಿ.ಇನಾಮದಾರ ಅವರಿಗೆ ಅಂತಿಮ ನಮನ ಸಲ್ಲಿಸಿ ನೇಗಿನಹಾಳದಿಂದ ಆಗಮಿಸಿದ ಸಿದ್ದರಾಮಯ್ಯ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು