Home ಜಾಲತಾಣದಿಂದ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿ ಶೇ 75ಕ್ಕೆ ಹೆಚ್ಚಳ: ಸಿದ್ದರಾಮಯ್ಯ ಭರವಸೆ

ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿ ಶೇ 75ಕ್ಕೆ ಹೆಚ್ಚಳ: ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿ ಶೇ 75ಕ್ಕೆ ಹೆಚ್ಚಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ, ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version