ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಸಲು ನಿರ್ಧಾರ: ಸಿದ್ದರಾಮಯ್ಯ ಭರವಸೆ

Prasthutha|

ಬೆಂಗಳೂರು: ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ಗಂಟೆಯಿಂದ 8 ಗಂಟೆಗೆ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಹಾಗೂ ಮಹಿಳಾ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿಯ ನಾಯಕರುಗಳು, ಪದಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ ನಡೆಸಿದರು. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕಾರ್ಮಿಕ ಮುಖಂಡರಿಗೆ ಭರವಸೆ ನೀಡಿದರು.

ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ, ಬಿಜೆಪಿ ಅವಧಿಯಲ್ಲಿ 8 ಗಂಟೆ ಅವಧಿಯನ್ನ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 12 ಗಂಟೆಯಿಂದ 8 ಗಂಟೆಗೆ ಕೆಲಸದ ಅವಧಿ ಇಳಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಭರವಸೆ ನೀಡಿದರು.



Join Whatsapp